HomeAgricultureಕುರಿ ಸಾಕಾಣಿಕೆಗೆ ಊಟ - ವಸತಿ ಸಹಿತ ಉಚಿತ ತರಬೇತಿ; ಇಲ್ಲಿದೆ ವಿವರ

ಕುರಿ ಸಾಕಾಣಿಕೆಗೆ ಊಟ – ವಸತಿ ಸಹಿತ ಉಚಿತ ತರಬೇತಿ; ಇಲ್ಲಿದೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 10 ದಿನಗಳ ಕುರಿ ಸಾಕಾಣಿಕೆ ಉಚಿತ ತರಬೇತಿಯು ಬರುವ 9 ಸೆಪ್ಟಂಬರ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular