HomeKarnatakaಭ್ರಷ್ಟಾಚಾರಿಗೆ ಮಂತ್ರಿ ಸ್ಥಾನ: ನಾಗೇಂದ್ರಗೆ ಆತ್ಮಸಾಕ್ಷಿ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ; ಇಲ್ಲವಾದಲ್ಲಿ ಸದನ...

ಭ್ರಷ್ಟಾಚಾರಿಗೆ ಮಂತ್ರಿ ಸ್ಥಾನ: ನಾಗೇಂದ್ರಗೆ ಆತ್ಮಸಾಕ್ಷಿ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ; ಇಲ್ಲವಾದಲ್ಲಿ ಸದನ ನಡೆಯಲು ಬಿಡಲ್ಲ: ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ

ಬಳ್ಳಾರಿ: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ನಾಗೇಂದ್ರಗೆ ಆತ್ಮಸಾಕ್ಷಿಯಿದ್ದರೆ, ನೈತಿಕತೆಯಿದ್ದರೆ, ದಲಿತರ ಬಗ್ಗೆ ಗೌರವ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.

ವಾಲ್ಮೀಕಿ ಸಮುದಾಯದ ಜನರು ಶಾಪ ಹಾಕುತ್ತಿದ್ದಾರೆ. ದಲಿತರ ಹಣ ತಿನ್ನಲು ನಿಮಗೆ ನಾಚಿಕೆಯಾಗಲ್ವಾ? ನಾಗೇಂದ್ರ ರಾಜೀನಾಮೆ ನೀಡುವವರೆಗೂ ಸದನ ನಡೆಯಲು ಬಿಡುವುದಿಲ್ಲ. ಸದನ ನಡೆಯಲು ಬಿಡಬಾರದು ಎಂದು ನಮ್ಮ ನಾಯಕರಿಗೆ ಮನವಿ ಮಾಡುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ನಾಗೇಂದ್ರಗೆ ಮಂತ್ರಿ ಸ್ಥಾನ ನೀಡಿರುವುದು ಕಾಂಗ್ರೆಸ್ ಭ್ರಷ್ಟಾಚಾರವನ್ನು ಬೆಂಬಲಿಸುತ್ತದೆ ಎಂಬುದನ್ನು ತೋರಿಸುತ್ತದೆ. ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಮಾಡಿರುವ ಆರೋಪದಲ್ಲಿ ನಾಗೇಂದ್ರ ಜೈಲು ಸೇರಿದ್ದರು. ಜೈಲಿಗೆ ಹೋಗಿ ಬಂದವರನ್ನು ಕಾಂಗ್ರೆಸ್ ಪಕ್ಷ ಮಂತ್ರಿ ಮಾಡಿದೆ ಎಂದು ಕಿಡಿಕಾರಿದರು.

ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡಲು ಅವರು ಮಾಡಿರುವ ಸಾಧನೆಯೇನು? ನಾಗೇಂದ್ರ ಮೇಲೆ ೮ ಕೋಟಿಅಕ್ರಮ ಹಣ ವರ್ಗಾವಣೆ ಕೇಸ್ ಇದೆ. ವಾಲ್ಮೀಕಿ ನಿಗಮದ ಅದ್ಜಿಕಾರಿ ಚಂದ್ರಶೇಖರ್ ಸಾವಿಗೆ ಕಾರಣರಾಗಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ ಮಾಡಿದ್ದಾರೆ. ಹೈಕಮಾಂಡ್ ನಾಯಕರಿಗೆ ಕಪ್ಪ ಕೊಟ್ಟಿದ್ದಾರೆ. ನಕಲಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಇಡಿ, ಸಿಬಿಐ ಮೂರು ಆರೋಪಪಟ್ಟಿ ಸಲ್ಲಿಸಿದೆ. ಅಂತವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular