HomeInternationalಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಢಾಕಾ: ವಸತಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಢಾಕಾ ಹೊರವಲಯದಲ್ಲಿ ವಸತಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಢಾಕಾ ವಿಶೇಷ ನ್ಯಾಯಾಲಯ ಶೇಖ್ ಹಸೀನಾ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಪೂರ್ವಾಚಲ್ ನ್ಯೂಟೌನ್ ನಲ್ಲಿರುವ ವಿನೇಶನಗಳನ್ನು ಅಕ್ರಮವಾಗಿ ಪಡೆದಿದ್ದ ಶೇಖ್ ಹಸೀನಾ, ಮಗನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಆಯೋಗ ಸಲ್ಲಿಸಿದ್ದ ಎರಡು ಚಾರ್ಜ್ ಶೀಟ್ ಆಧರಿಸಿ ಢಾಕಾ ನ್ಯಾಯಾಲಯ ಈ ತೀರ್ಪು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಪ್ರಕರಣದಲ್ಲಿ ಶೇಖ್ ಹಸೀನಾ ಸಹೋದರಿ ಶೇಖ್ ರೆಹಾನಾ, ಸಂಬಂಧಿ ಬ್ರಿಟನ್ ಸಂಸದೆ ತುಲಿಪ್ ರಿಜ್ವಾನಾ ಸಿದ್ದಿಕ್ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular