ಮಾಜಿ ಪ್ರಧಾನಿ ಶೇಖ್ ಹಸೀನಾ ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಮನವಿ

ಢಾಕಾ: ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಮರಳಿ ಕಳಿಸುವಂತೆ ಭಾರತಕ್ಕೆ ರಾಜತಾಂತ್ರಿಕ ಸಂದೇಶ ರವಾನಿಸಲಾಗಿದೆ.

ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ಈ ಮಾಹಿತಿ ನೀಡಿದೆ. ಬಾಂಗ್ಲಾದೇಶದ ಅಂತರ ರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಶೇಖ್ ಹಸೀನಾ ಸೇರಿದಂತೆ ಮಾಜಿ ಸಚಿವರ ವಿರುದ್ಧ ಅನೇಕ ಪ್ರಕರಣ ದಾಖಲಿಸಿದ್ದು ಅರೆಸ್ಟ್ ವಾರೆಂಟ್ ಹೊರಡಿಸಿದೆ. ನ್ಯಾಯಾಂಗ ಪ್ರಕ್ರಿಯೆ ಭಾಗವಾಗಿ ಶೇಖ್ ಹಸೀನಾ ಅವರನ್ನು ಬಾಂಗ್ಲಾಕ್ಕೆ ವಾಪಸ್ ಕಳಿಸುವಂತೆ ಭಾರತ ಸರ್ಕಾರಕ್ಕೆ ರಾಜತಾಂತ್ರಿಕ ಸಂದೇಶ ಕಳಿಸಿರುವುದಾಗಿ ವಿದೇಶಾಂಗ ಸಚಿವ ತೌಹಿದ್ ಹುಸೇನ್ ತಿಳಿಸಿದ್ದಾರೆ

ಢಾಕಾ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ(ICT) ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read