ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂತ್ರಪಿಂಡ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶಿಬು ಸೊರೇನ್ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಅವರಿಗೆ ಮೆದುಳು ಆಘಾತವುಂಟಾಗಿದೆ. ಅವರನ್ನು ಹೆಲಿಕಾಪ್ಟರ್ ಮೂಲಕ ದೆಹಲಿಯ ಅಪೊಲೊ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇಂದು ರಾಮದಾಸ್ ಸೊರೇನ್ ತಮ್ಮ ನಿವಾಸದಲ್ಲಿ ಬಾತ್ ರೂಮ್ ನಲ್ಲಿ ಕುಸಿದು ಬಿದ್ದಿದ್ದರು. ಇದರಿಂದಾಗಿ ಅವರ ತಲೆಗೆ ಪೆಟ್ಟಾಗಿತ್ತು ಎಂದು ತಿಳಿದುಬಂದಿದೆ.