HomeKarnatakaಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು:...

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು: ಸಂಸದ ಬೊಮ್ಮಾಯಿ ಆಗ್ರಹ

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಅವನು ಕೋಮು ಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದು, ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಆರೋಪಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ಗಡಿಪಾರು ಮಾಡಬೇಕು ಎಂಬ ನಿಟ್ಟಿನಲ್ಲಿ ಕರೆ ನೀಡಿರುವ ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 21ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡನಲ್ಲಿರುವ ಶ್ರೀ ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯುಂಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದು ಅತ್ಯಂತ ಹೇಯ ಕೃತ್ಯ, ಕ್ಷಮಿಸಲಾರದಂತ ಕೃತ್ಯ. ಹನುಮಾನ್ ರಸ್ತೆಗಿಂತ ಎತ್ತರದಲ್ಲಿದೆ. ಅಲ್ಲಿ ಗೇಟ್ ಇದೆ. ಗೇಟ್ ತೆಗೆದು ಒಳಗೆ ಬಂದು ಸ್ಥಾಪಿತವಾಗಿರುವ ಹನುಮಂತ ದೇವರ ದೇವಸ್ಥಾನದಲ್ಲಿ ಒಳಗೆ ಬಂದು ಮೂತ್ರ ವಿಸರ್ಜನೆ ಮಾಡಿದ್ದಾನೆ. ಆತ ಕುಡಿದ ಮತ್ತಿನಲ್ಲಿ ಇದ್ದಾನೆ ಎಂದು ಅನಿಸುವುದಿಲ್ಲ. ಆತ ಪಜ್ಞಾಪೂರ್ವಕವಾಗಿ ಮಾಡಿದ್ದಾನೆ. ಕುಡುಕರು ನಿಂತಲ್ಲೇ ಮೂತ್ರ ವಿಸರ್ಜನೆ ಮಾಡುತ್ತಾರೆ. ಪೊಲೀಸರು ಈ ಪ್ರಕರಣವನ್ನು ತಿಳಿಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಗಂಭೀರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಇದೊಂದೆ ಪಕರಣವನ್ನು ಪತ್ಯೇಕವಾಗಿ ನೋಡುವ ಹಾಗಿಲ್ಲ. ಶಿಗ್ಗಾವಿಯಲ್ಲಿ ಕೊಲೆ ಮಾಡಿ ಆ ಕುಟುಂಬದ ಮೇಲೆ ಒತ್ತಡ ಹೇರಿ ರಾಜಿ ಮಾಡುವ ಕೆಲಸ ಮಾಡಿದ್ದಾರೆ. ಸವಣೂರಿನಲ್ಲಿ ಶಿಕ್ಷಕನನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದರು. ಈ ಎರಡೂ ಪ್ರಕಣದಲ್ಲಿ ಯಾರಿಗೂ ಶಿಕ್ಷೆಯಾಗಿಲ್ಲ. ಇಂತಹ ಹಲವಾರು ಪ್ರಕರಣಗಳಾಗಿದ್ದಾವೆ ಕೆಲವು ಬೆಳಕಿಗೆ ಬಂದಿವೆ. ಈ ರೀತಿ ಹಲವಾರು ಪ್ರಕರಣಗಳು ಹಾನಗಲ್‌, ಹಾವೇರಿ, ರಾಣೆಬೆನ್ನೂರಿನಲ್ಲಿ ನಡೆದಿವೆ. ರಾಣೆಬೆನ್ನೂರಿನಲ್ಲಿ ಅಕ್ರಮ ಕಸಾಯಿಖಾನೆ ವಿರುದ್ಧ ಪ್ರತಿಭಟನೆ ನಡೆಸಿದ ಭಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದರು.

ಶಿಗ್ಗಾವಿಯಲ್ಲಿ ಈ ಘಟನೆ ನಡೆದ ತಕ್ಷಣ ಟ್ಯಾಕ್ಸಿ ಸ್ಟ್ಯಾಂಡ್ ಹುಡುಗರು ಜಾಗೃತರಾಗಿ ಪೊಲೀಸರಿಗೆ ದೂರು ಕೊಟ್ಟಿದ್ದಕ್ಕೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಅವನು ಹಾನಗಲ್ ತಾಲೂಕಿನ ಆಡೂರಿನವನು ಅವನಿಗೆ ಶಿಗ್ಗಾವಿಯಲ್ಲಿ ಪಟ್ಟಾ ಕೊಟ್ಟಿದ್ದಾರೆ. ಅದಕ್ಕೆ ಅವನು ಶಾಸಕರಿಗೆ ತನ್ನ ರಿಟರ್ನ್ ಗಿಫ್ಟ್ ಕೊಟ್ಟಿದ್ದೇನೆ ಅಂತ ಹೇಳಿದ್ದಾನೆ. ಆ ರೀತಿ ಹೇಳಲು ಅವನಿಗೆ ಪ್ರಜ್ಞೆ ಇಲ್ಲದೇ ಹೇಳುತ್ತಾನಾ ? ಶಿಗ್ಗಾವಿ ಸವಣೂರಿನಲ್ಲಿ ಕಳೆದ ಇಪ್ಪತ್ತು ವರ್ಷದಲ್ಲಿ ಯಾವುದೇ ಕೋಮು ಸಂಘರ್ಷ ಇಲ್ಲದೇ ಶಾಂತಿ ಕಾಪಾಡುವ ಕೆಲಸ ಮಾಡಿದ್ದೇವೆ. ಆತ ಕೋಮು ಗಲಭೆ ಸೃಷ್ಟಿಸಿ ಶಾಂತಿ ಕದಡುವ ಕೆಲಸ ಮಾಡಿದ್ದಾನೆ. ಇತ್ತೀಚಿನ ದಿನಗಳಲ್ಲಿ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ಕೊಟ್ಟಿರುವುದಕ್ಕೆ ಈ ರೀತಿಯ ಬೆಳವಣಿಗೆ ಆಗಲು ಕಾರಣವಾಗಿದೆ. ಪೊಲೀಸರು ಕ್ರಮ ಕೈಗೊಂಡ ತಕ್ಷಣ ಮುಗಿಯುವುದಿಲ್ಲ. ಆತ ಮತ್ತೆ ಬೇಲ್ ಮೇಲೆ ಬಂದು ಇಲ್ಲಿಯೇ ನಿಂತು ನೀವೇನು ಮಾಡಿದ್ದೀರಿ ಎಂದು ಕೇಳುತ್ತಾನೆ. ಕೋಮು ಶಕ್ತಿ ದುಷ್ಟ ಶಕ್ತಿಗಳಿಗೆ ಕುಮ್ಮಕ್ಕು ಕೊಡುವ ಕೆಲಸ ಆಗಿದೆ. ಈಗಾಗಲೇ ಟ್ಯಾಕ್ಸಿ ಸ್ಟ್ಯಾಂಡ್‌ನವರು ಮತ್ತು ಪ್ರಮೋದ್ ಮುತಾಲಿಕ ಬಂದ್ ಕರೆ ನೀಡಿದ್ದಾರೆ. ಅವರಿಗೆ ನಮ್ಮ ಬೆಂಬಲ ಇದೆ. ಯಾವುದೇ ಕೋಮಿನ ವಿರುದ್ಧ ಹಬ್ಬದ ವಿರುದ್ಧ ನಮ್ಮ ಬಂದ್ ಇಲ್ಲ. ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬಂದ್‌ಗೆ ಬೆಂಬಲ ನೀಡಿ, ನಾವು ಯಾರಿಗೂ ಒತ್ತಡ ಹೇರಿ ಬಂದ್ ಮಾಡುವುದಿಲ್ಲ. ಹಿಂಸಾಚಾರ, ಕೋಮುಗಲಬೆ ಆಗಬಾರದು ಎಂದರೆ ಎಲ್ಲ ಕೋಮಿನವರು ಬಂದ್‌ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಹಾವೇರಿ ಜಿಲ್ಲಾಡಳಿತ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ನಮ್ಮ ನಮ್ಮ ನಡುವೆ ವ್ಯತ್ಯಾಸ ಇಲ್ಲ. ಅಪರಾಧಿಗಳಿಗೆ ಭಯ ಇಲ್ಲ. ಹಳ್ಳಿಗಳಲ್ಲಿ ಇಸ್ಪೀಟ್ ಒಸಿ ಆಡಿಸುತ್ತಿದ್ದಾರೆ. ಎಲ್ಲ ಕಡೆ ಡ್ರಗ್ ಇದೆ. ನಮ್ಮ ಹೋರಾಟ ಸಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ಆದ್ದರಿಂದ ಎಲ್ಲ ಕೋಮಿನವರು ಬೆಂಬಲ ಕೊಡಬೇಕು. ಜನರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದರೆ ಜಿಲ್ಲಾಡಳಿತ ಏನು ಮಾಡುತ್ತದೆ. ಎಲ್ಲಿ ಬೇಕಲ್ಲಿ ನಂಬರ್ ಟು ದಂಧೆ ನಡೆಯುತ್ತಿದೆ. ಇಸ್ಪೀಟ್ ಆಡುವವರನ್ನು ಬಂಧೀಸುವುದಿಲ್ಲ. ಈ ಬಗ್ಗೆ ಎಷ್ಟು ಬಾರಿ ಎಸ್ಪಿ ಗಮನಕ್ಕೆ ತರಲಾಗಿದೆ. ಅವರು ಸ್ಮಾಡ್ ಮಾಡಿದರು. ಆದರೂ ಏನೂ ಆಗಿಲ್ಲ. ಸರಾಸರಿ ಒಂದು ಗಾಮ ಪಂಚಾಯತಿಗೆ ಒಂದು ಕ್ಲಬ್ ನಡೆಯುತ್ತಿದೆ. ನಾನು ಜಿಲ್ಲಾಡಳಿತ ಸರ್ಕಾರ, ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿಯವರನ್ನು ಕೇಳುತ್ತೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿಯವರು ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಅದು ಕಾಂಗ್ರೆಸ್‌ನ ಅಧಪತನ ತೋರಿಸುತ್ತದೆ. ಅಂತಹ ಮಂತಿ ಶಾಂತಿ ಕಾಪಾಡಲು ಸಾಧ್ಯವೇ, ಹಿರೇಕೆರೂರಿನಲ್ಲಿ ಕೊಲೆಯಾದಾಗ, ಹಾನಗಲ್‌ನಲ್ಲಿ ಗಲಾಟೆಯಾದಾಗ ರುದಪ್ಪ ಲಮಾಣಿ ಮಾತನಾಡಿದ್ದಾನಾ? ನಾವು ಈ ಮಣ್ಣಿನ ಅನ್ನ ತಿಂದಿದ್ದೇವೆ ಹೀಗಾಗಿ ನಾವು ಸತ್ಯ ಮಾತನಾಡುತ್ತೇವೆ ಎಂದು ತಿರುಗೇಟು ನೀಡಿದರು.

ಅಧಿವೇಶನದಲ್ಲಿ ಬರಗಾಲದ ಕುರಿತು ಚರ್ಚಿಸುತ್ತಿಲ್ಲ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಮಾಡುತಿರರುವ ಆರೋಪದ ವಿಚಾರವಾಗಿ, ಒಂದು ತಿಂಗಳು ದೆಹಲಿಗೆ ಅಲೆದಾಡಿ ಕಾಲ ಹರಣ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಬರ ಬಿದ್ದಿದೆ ಈಗ ಮೊಡ ಬಿತ್ತನೆ ಮಾಡುವ ಮಾತನಾಡುತ್ತಾರೆ. ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕಿತ್ತು. ಇನ್ನೂ ಮೀನ ಮೇಷ ಎಣಿಸುತ್ತಿದೆ. ಬರಗಾಲದ ಬಗ್ಗೆ ರಾಜ್ಯ ಸರ್ಕಾರಕ್ಕೆ ಅಷ್ಟು ಕಾಳಜಿ ಇದ್ದರೆ ನಾಳೆಯೇ ಸಚಿವ ನಾಗೇಂದ್ರನ ರಾಜೀನಾಮೆ ಪಡೆಯಲಿ ನಾವು ಬರಗಾಲದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular