BIG NEWS: ಉಪಚುನಾವಣೆ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಪೇಪರ್ ಗಳು ಪತ್ತೆ!

ಹಾವೇರಿ: ಶಿಗ್ಗಾಂವಿಯಲ್ಲಿ ಉಪಚುನಾವಣೆ ಮುಗಿದಿದೆ. ಉಪಚುನಾವಣೆ ಮುಗಿದ ಮರುದಿನವೇ ಕಾಲುವೆಗಳಲ್ಲಿ ಬ್ಯಾಲೆಟ್ ಪೇಪರ್ ಬಾಕ್ಸ್ ಗಳು ಪತ್ತೆಯಾಗಿವೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಆದರೆ ಬ್ಯಾಲೆಟ್ ಪೇಪರ್ ಈ ಬಾಕ್ಸ್ ಗಳು ಜಿಲ್ಲಾಡಳಿತ ಹಳೆಯದಾಗಿದ್ದು, ಇವುಗಳಿಗೂ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ. ಇನ್ನೊಂದೆಡೆ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಹಾವೇರಿ ತಾಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿವೆ. ಶಿಗ್ಗಾಂವಿ ಮತದಾನ ಪ್ರಕ್ರಿಯೆ ಬುಧವಾರವಷ್ಟೇ ಮುಕ್ತಾಯಗೊಂಡಿದೆ. ಮಾರನೆ ದಿನವೇ ಈ ಬಾಕ್ಸ್ ಗಳು ಪತ್ತೆಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಉಪಚುನಾವಣೆಯಲ್ಲಿ ಇವಿಎಂ ಬಳಸಲಾಗಿದೆ. ಹಾಗಾಗಿ ಈ ಬ್ಯಾಲೇಟ್ ಪೇಪರ್ ಗಳಿಗೂ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇವು ನಿರುಪಯುಕ್ತವಾದದ್ದು ಎಂದು ಜಿಲ್ಲಾಡಳಿತ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read