BIG NEWS: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ: ಭರತ್ ಬೊಮ್ಮಾಯಿ ಆರೋಪ

ಹಾವೇರಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ.

ಉಪಚುನಾವಣೆ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನು ಹರಿಸಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಹಣ ಬಲದಿಂದಾಗಿ ಕಾಂಗ್ರೆಸ್ ಗೆ ಗೆಲುವಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ನಾನು ಸೋತರೂ ಶಿಗ್ಗಾಂವಿ ಕ್ಷೇತ್ರದ ಅಭಿವೃದ್ಧಿಗಾಗಿ, ಜನರ ಪರವಾಗಿ ನಾನು ಕೆಲಸ ಮಾಡುತ್ತೇನೆ. ಸೋಲಿಗೆ ಕಾರಣವಾದ ಅಂಶಗಳ ಬಗ್ಗೆಯೂ ಮುಂದಿನ ದಿನಗಳಲ್ಲಿ ವಿಶ್ಲೇಷಣೆ ಮಾಡಿ ಸರಿಪಡಿಸಿಕೊಳ್ಳುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read