ಬೆಂಗಳೂರು : ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಸ್ಪರ್ಧಿಸಲಿದ್ದಾರೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಶುಭ ಹಾರೈಕೆಗಳು. ತಮ್ಮ ಗೆಲುವಿಗಾಗಿ ರಾಜ್ಯದ ಕಾಂಗ್ರೆಸ್ ಪಕ್ಷ ಒಗ್ಗೂಡಿ ಶ್ರಮಿಸಲಿದೆ. ಶಿಗ್ಗಾವಿ ಜನರ ಪ್ರತಿನಿಧಿಯಾಗಿ ತಾವು ವಿಧಾನಸಭೆ ಪ್ರವೇಶಿಸುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
https://twitter.com/siddaramaiah/status/1849447125714960533?ref_src=twsrc%5Egoogle%7Ctwcamp%5Eserp%7Ctwgr%5Etweet