ಶಿವಮೊಗ್ಗ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟಬೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಶಕುನ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೃಷ್ಣಮೂರ್ತಿ ಶಿಗ್ಗಾದ್ (62) ಮೃತ ರೈತರು. ಹಿರೇಶಕುನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ, ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.