ಶಿವಮೊಗ್ಗ: ಕ್ರಷರ್ ಉದ್ಯಮಿಯೊಬ್ಬರು ಲಾಡ್ಜ್ ರೂಮ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ.
ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

