HomeKarnatakaವ್ಹೀಲಿಂಗ್ ಮಾಡದಂತೆ ಬುದ್ಧಿವಾದ ಹೇಳಿದ ಶಿಕ್ಷಕನಿಗೆ ಚಾಕು ಇರಿತ: ಮೂವರು ಅರೆಸ್ಟ್

ವ್ಹೀಲಿಂಗ್ ಮಾಡದಂತೆ ಬುದ್ಧಿವಾದ ಹೇಳಿದ ಶಿಕ್ಷಕನಿಗೆ ಚಾಕು ಇರಿತ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿವಾದ ಹೇಳಿದ ಕಂಪ್ಯೂಟರ್ ಶಿಕ್ಷಕನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳಾರ ರಾತ್ರಿ ನಡೆದಿದೆ. 23 ವರ್ಷದ ಸುಶೀಲ್ ಚಾಕು ಇರಿತಕ್ಕೆ ಒಳಗಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಹನಾಜ್(20), ಅಹಮದ್ ಮುಬಾರಕ್(21) ಅವರನ್ನು ಬಂಧಿಸಲಾಗಿದ್ದು, 16 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ಗೌಸ್(22) ನಾಪತ್ತೆಯಾಗಿದ್ದಾನೆ.

ಶಿಕಾರಿಪುರದ ದೊಡ್ಡಪೇಟೆ ವಿಠಲ ದೇವಸ್ಥಾನ ಸಮೀಪ ರಾತ್ರಿ ಊಟ ಮಾಡಿದ ಬಳಿಕ ಖಾಸಗಿ ಶಾಲೆ ಕಂಪ್ಯೂಟರ್ ಶಿಕ್ಷಕ ಸುಶೀಲ್ ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ವಲ್ಪ ಸಮಯದ ನಂತರ ಸ್ನೇಹಿತರೊಂದಿಗೆ ಬಂದ ಆರೋಪಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ತೀವ್ರ ಗಾಯಗೊಂಡಿದ್ದ ಸುಶೀಲನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ವಿರೋಧಿಸಿ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು. ಅನ್ಯಕೋಮಿನವರಿಂದ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದರೂ ಸರ್ಕಾರ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಸಂಸದರು ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular