HomeLatest Newsಒಂದು ವರ್ಷದಿಂದ ಮಗನ ಮುಖ ನೋಡದ ಸಂಗತಿ ಬಹಿರಂಗಪಡಿಸಿದ ಶಿಖರ್ ಧವನ್ ಮನಕಲಕುವ ಪೋಸ್ಟ್

ಒಂದು ವರ್ಷದಿಂದ ಮಗನ ಮುಖ ನೋಡದ ಸಂಗತಿ ಬಹಿರಂಗಪಡಿಸಿದ ಶಿಖರ್ ಧವನ್ ಮನಕಲಕುವ ಪೋಸ್ಟ್

ನವದೆಹಲಿ: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಅವರು ತಮ್ಮ ಪುತ್ರನ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಾವು ಕಳೆದ ಒಂದು ವರ್ಷದಿಂದ ಮಗ ಜೊರಾವರ್ ಮುಖ ನೋಡಿಲ್ಲ ಎನ್ನುವ ಸಂಗತಿಯನ್ನು ಶಿಖರ್ ಧವನ್ ಬಹಿರಂಗಪಡಿಸಿದ್ದಾರೆ. 9 ವರ್ಷದ ಮಗನ ಭೇಟಿ ಮಾಡದಂತೆ ತಮ್ಮನ್ನು ತಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ನಿನ್ನನ್ನು ಮುಖತಃ ಭೇಟಿ ಮಾಡಿ ಒಂದು ವರ್ಷವೇ ಆಯಿತು. ಕಳೆದ ಮೂರು ತಿಂಗಳಿನಿಂದಲೂ ನಿನ್ನನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ. ಆದರೆ, ನನ್ನನ್ನು ತಡೆಯುತ್ತಿದ್ದಾರೆ. ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇಂತಿ ನಿನ್ನ ಪ್ರೀತಿಯ ಅಪ್ಪ’ ಎಂದು ಮಗನ ಫೋಟೋ ಜೊತೆ ಶಿಖರ್ ಧವನ್ ಬರೆದುಕೊಂಡಿದ್ದಾರೆ.

ಅಕ್ಟೋಬರ್ ನಲ್ಲಿ ಶಿಖರ್ ಧವನ್ ಮತ್ತು ಪತ್ನಿ ಆಯಿಶಾ ಮುಖರ್ಜಿ ವಿಚ್ಛೇದನ ಪಡೆದುಕೊಂಡಿದ್ದರು. ಈಗ ಮಗನ ಹುಟ್ಟುಹಬ್ಬಕ್ಕೆ ಅವರು ಹಾಕಿದ ಮನಕಲಕುವ ಪೋಸ್ಟ್ ವೈರಲ್ ಆಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular