ನಾಳೆ ಶಿವಮೊಗ್ಗ ಬಂದ್: ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲು ತೀರ್ಮಾನ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್ ಅವರ ಪಾರ್ಥಿವ ಶರೀರದ ಮೆರವಣಿಗೆ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟುಗಳನ್ನು ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಮಂಜುನಾಥ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ, ಗುರುವಾರ ಬೆಳಗ್ಗೆ ಮಂಜುನಾಥ್ ಅವರ ಮೃತದೇಹ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನದವರೆಗೆ ಮನೆ ಬಳಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು. ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ನಂತರ ಮೆರವಣಿಗೆಯೊಂದಿಗೆ ರೋಟರಿ ಚಿತಾಗಾರಕ್ಕೆ ತೆರಳಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು. ಯಾವುದೇ ಅಡ್ಡಿ ಆತಂಕ ಇಲ್ಲದೆ ಅಂತ್ಯಕ್ರಿಯೆ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read