ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ : ಬೆಳಗ್ಗೆ 9:50 ಕ್ಕೆ ಫಸ್ಟ್ ಫ್ಲೈಟ್

ಶಿವಮೊಗ್ಗ :  ಶಿವಮೊಗ್ಗ ಜನರ ದಶಕದ ಕನಸು ನನಸಾಗುತ್ತಿದ್ದು,  ಶಿವಮೊಗ್ಗದಲ್ಲಿ  ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ನಾಳೆಯಿಂದ (ಆ.31) ಆರಂಭವಾಗಲಿವೆ.

ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ನೂತನ ಏರ್ ಪೋರ್ಟ್ ಗೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.
ವಿಮಾನಯಾನ ಸೇವೆಗಳ ಮೊದಲ ಹೆಜ್ಜೆಯಾಗಿ ಇಂಡಿಗೋ ಸಂಸ್ಥೆಯು ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. 4,340 ಚದರ ಮೀಟರ್ ವಿಸ್ತೀರ್ಣದ ಪ್ರಯಾಣಿಕರ ಟರ್ಮಿನಲ್ ಮತ್ತು 3,050 ಮೀಟರ್ ಉದ್ದದ ರನ್ವೇಯನ್ನು ಇದು ಒಳಗೊಂಡಿದೆ. ಈ ಮೂಲಕ ಜನರ ದಶಕದ ಕನಸು ಈಡೇರಿದ್ದು, ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭವಾಗಲಿದೆ.

ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್ಬಸ್ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read