ಜೈಲಿನಲ್ಲಿದ್ದ ಕೈದಿ ಹೊಟ್ಟೆಯೊಳಗಿತ್ತು ಮೊಬೈಲ್….!

ಜೈಲಿನಲ್ಲಿರುವ ಖೈದಿಗಳು ಹೊರಗಿನ ಪ್ರಪಂಚದಲ್ಲಿನ ವ್ಯಕ್ತಿಗಳನ್ನು ಸಂಪರ್ಕಿಸಲು ಗುಪ್ತವಾಗಿ ಮೊಬೈಲ್ ಇಟ್ಟುಕೊಂಡಿರುವ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಪೊಲೀಸರು ತಪಾಸಣೆ ನಡೆಸುವ ಸಂದರ್ಭದಲ್ಲಿ ಈ ಮೊಬೈಲ್ ಗಳನ್ನು ವಶಪಡಿಸಿಕೊಳ್ಳುತ್ತಿರುತ್ತಾರೆ.

ಆದರೆ ಶಿವಮೊಗ್ಗದಲ್ಲಿ ನಡೆದಿರುವ ವಿಚಿತ್ರ ಘಟನೆಯಲ್ಲಿ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಅಚ್ಚರಿಯಾದರೂ ಇದು ನಿಜ…! ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿದ್ದ ಪರಶುರಾಮ ಅಲಿಯಾಸ್ ಚಿಂಗಾರಿ ಎಂಬಾತನ ಹೊಟ್ಟೆಯಲ್ಲಿ ಈ ಮೊಬೈಲ್ ಪತ್ತೆಯಾಗಿದೆ.

ಪರಶುರಾಮ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಈತನನ್ನು ಕಾರಾಗೃಹದ ಒಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಸಹ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಆತನನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಮೊಬೈಲ್ ಹೊರ ತೆಗೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read