HomeKarnatakaಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಆತ್ಮಹತ್ಯೆ: ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.

ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮನನೊಂದ ಬಾಲಕಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ತಂದೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2020ರಲ್ಲಿ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ನ್ಯಾಯಾಧೀಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಆರು ತಿಂಗಳು ಸಾದಾ ಜೈಲು ಶಿಕ್ಷೆ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತಾ ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular