ನೇರ ಪಾವತಿ ಪೌರ ಕಾರ್ಮಿಕರು ಖಾಯಂ; ಪಾಲಿಕೆ ಆವರಣದಲ್ಲಿ ಸಂಭ್ರಮ

ನೇರ ಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಮಹಾನಗರ ಪಾಲಿಕೆ ಶಿವಮೊಗ್ಗ ವತಿಯಿಂದ ಇಂದು 107 ನೇರ ಪಾವತಿ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಆದ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು.

ಖಾಯಂ ಆದ ನೌಕರರು ಪಾಲಿಕೆ ಆವರಣದಲ್ಲಿರುವ ನಂದಿಗೆ ಪೂಜೆ ಮಾಡಿ ಬಳಿಕ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಖಾಯಂಗೊಳಿಸಲು ವಿಶೇಷ ಆಸಕ್ತಿ ತೋರಿಸಿದ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳಿಗೆ, ವಿಧಾನಸಭಾ ಸದಸ್ಯರಾದ ಎಸ್.ಎನ್. ಚನ್ನಬಸಪ್ಪ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದಪ್ಪ, ನೇರ ಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪೆಂಚಲಯ್ಯ, ಕಾರ್ಯದರ್ಶಿ ರವೀಶ್ ಹಾಗೂ ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read