ಶಿವಮೊಗ್ಗ : ಜ.29 ರಿಂದ ಫೆ.3 ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read