HomeKarnatakaಹೃದಯಾಘಾತ: ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ನಂದನ್ ವಿಧಿವಶ

ಹೃದಯಾಘಾತ: ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ನಂದನ್ ವಿಧಿವಶ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಂದನ್ (57) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ ನಂದನ್ ಪಾರ್ಥಿವ ಶಸೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂಯಕ್ರಿಯೆ ನೆರವೇರಲಿದೆ.

ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ವರ್ಷಗಳಿಂದ ನಂದನ್ ಶಿವಮೊಗ್ಗದಲ್ಲಿ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದರು. ಅವರು ತೆಗೆದ ಛಾಯಾಚಿತ್ರಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ, ಗೌರವಗಳಿಗೆ ಪಾತ್ರವಾಗಿದ್ದವು. ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಿಗೆ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular