HomeKarnatakaBIG NEWS: ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್

BIG NEWS: ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದೆ. ತಡರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರತಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ನನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೋ ಪ್ಯಾಲೆಸ್ಟೈನ್ ನಿಂದ ಈ ಕೃತ್ಯವೆಸಗಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ.ಸೇವ್ ಪ್ಯಾಲೆಸ್ಟೈನ್-ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಹ್ಯಾಕ್ ಆದ ಬಳಿಕ ವಿವಿ ತಾಂತ್ರಿಕ ತಂಡ ವೆಬ್ ಸೈಟ್ ಸ್ಥಗಿತಗೊಳಿಸಿದೆ. ವಿವಿ ವೆಬ್ ಸೈಟ್ ಹ್ಯಾಕ್ ಆಗಿರುವ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular