ಶಿವಮೊಗ್ಗ : ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗದ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಿದ ಪರಿಣಾಮ ಮೆಸ್ಕಾಂ ಕಚೇರಿಯ ಕಿಟಕಿಯ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ. ಪೊಲೀಸರು ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ್ದಾರೆ. ಕಲ್ಲು ಎಸೆದ ಬಿಜೆಪಿ ಕಾರ್ಯಕರ್ತ ಮುರುಗೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯುತ್ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಇಂಧನ ಸಚಿವ ಕೆಜೆ ಜಾರ್ಜ್ ವಿರುದ್ಧ ಕೂಡ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
You Might Also Like
TAGGED:shivamoga strike