ಶಿವಮೊಗ್ಗ : ‘APMC’ ಪರವಾನಗಿ ನವೀಕರಿಸಿಕೊಳ್ಳಲು ವರ್ತಕರಿಗೆ ಸೂಚನೆ

ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ.

ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಿ ಅವಶ್ಯಕ ದಾಖಲೆಗಳೊಂದಿಗೆ ಫೆ.29 ರ ಒಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಫೆ.29 ರ ನಂತರ ಲೈಸೆನ್ಸ್ ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಎಪಿಎಂಸಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read