ಶಿವಮೊಗ್ಗ :ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಎಫ್-4 ಸಂತೇಕಡೂರು ಮಾರ್ಗದಲ್ಲಿ ಭೂಗತ ಕೇಬಲ್ಗಳನ್ನು ಚಾಲನೆಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.03 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.