HomeKarnatakaಶಿವಮೊಗ್ಗ ಗಲಭೆ ಪ್ರಕರಣ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು:...

ಶಿವಮೊಗ್ಗ ಗಲಭೆ ಪ್ರಕರಣ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು: ಶಾಸಕ B.Y ವಿಜಯೇಂದ್ರ

ಶಿವಮೊಗ್ಗ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕಿಡಿ ರಾಜ್ಯಕ್ಕೆ ಹಬ್ಬಬಹುದು ಎಂದು ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.

ಶಿವಮೊಗ್ಗ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಂತಿಕದಡಲು ಯತ್ನಿಸಲಾಗಿದ್ದು, ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಇದರ ಕಿಡಿ ರಾಜ್ಯಕ್ಕೆ ಹಬ್ಬಬಹುದು ಎಂದು ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ನಡೆದ ಗಲಾಟೆ ಸಣ್ಣ ಗಲಾಟೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಬಿ.ವೈ ವಿಜಯೇಂದ್ರ ಗೃಹ ಸಚಿವ ಜಿ.ಪರಮೇಶ್ವರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದರು. ಮೊದಲೇ ರಾಜ್ಯದಲ್ಲಿ ಕಾವೇರಿಯಿಂದ ಭಾರಿ ಗಲಾಟೆ ಆಗುತ್ತಿದೆ, ಮತ್ತೆ ಈ ರೀತಿ ಗಲಾಟೆಯಾದರೇ ಇಡೀ ರಾಜ್ಯಕ್ಕೆ ಗಲಭೆ ಹಬ್ಬಬಹುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular