
ರಾಗಿಗುಡ್ಡದಲ್ಲಿ ಓಪನ್ ಆಗಿದ್ದ ಅಂಗಡಿಗಳನ್ನು ಪೊಲೀಸರು ಕ್ಲೋಸ್ ಮಾಡಿಸುತ್ತಿದ್ದಾರೆ. ಹಾಗೂ ಮುಖ್ಯ ರಸ್ತೆಗಳನ್ನು ಬ್ಯಾರಿಕೇಡ್ ಆಗಿ ಬಂದ್ ಮಾಡಿಸುತ್ತಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ. ಇದುವರೆಗೆ 60 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಗಲಾಟೆ ವೇಳೆ ಕಲ್ಲೆಸೆತದಿಂದಾಗಿ 7 ಮನೆಗಳ ಗಾಜು ಪುಡಿಪುಡಿಯಾಗಿದೆ. ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.

