BREAKING : ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬ್ಯಾನರ್, ಬಟಿಂಗ್ಸ್ ತೆರವು

ಶಿವಮೊಗ್ಗ : ಜಿಲ್ಲೆಯ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಹಬ್ಬಕ್ಕೆ ಹಾಕಿದ್ದ ಬ್ಯಾನರ್, ಬಟಿಂಗ್ಸ್ ತೆರವುಗೊಳಿಸಲಾಗಿದೆ.

ಭಾರಿ ವಿವಾದ ಗಲಾಟೆ ನಡೆದ ಬಳಿಕ  ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಜೆಸಿಬಿ ಮೂಲಕ ರಾಗಿಗುಡ್ಡ ಪ್ರದೇಶದಲ್ಲಿ ಹಾಕಿದ್ದ ಬ್ಯಾನರ್, ಬಟಿಂಗ್ಸ್ ತೆರವುಗೊಳಿಸಲಾಗಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಘಟನೆ ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 12 ಮಂದಿ ಗಾಯಗೊಂಡಿದ್ದಾರೆ.ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದ್ದು, ಟಿಪ್ಪುವಿನ ಕಟೌಟ್ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದಾದ ಬಳಿಕ ಗಲಭೆ ನಡೆದಿದೆ. ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 60 ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read