ಬೆಂಗಳೂರು : ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ್ದ ಸಿದ್ದರಾಮಯ್ಯ ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸಿದ್ದರು.