HomeLatest Newsಹಡಗು ಅಗ್ನಿ ಅವಘಡ: ಗಾಯಾಳುಗಳಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಹಡಗು ಅಗ್ನಿ ಅವಘಡ: ಗಾಯಾಳುಗಳಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಮಂಗಳೂರು: ಕೇರಳದ ಕೋಯಿಕ್ಕೋಡ್ ಭಾಗದ ಅರಬ್ಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಎಂವಿ ವ್ಯಾನ್ 503 ಹಡಗಿನಲ್ಲಿದ್ದ ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರು ಮತ್ತು ರಕ್ಷಿಸಲ್ಪಟ್ಟ ಸಿಬ್ಬಂದಿಯನ್ನು ಐಎನ್ಎಸ್ ಸೂರತ್ ಹಡಗು ಸೋಮವಾರ ರಾತ್ರಿ ಮಂಗಳೂರು ಕರಾವಳಿಗೆ ಶಿಫ್ಟ್ ಮಾಡಿದೆ. ಅಲ್ಲಿಂದ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾದ 8 ಮಂದಿ, ಮಯನ್ಮಾರ್ ಮತ್ತು ತಾಯ್ವಾನ್ ನ ನಾಲ್ವರು, ಇಂಡೋನೇಷ್ಯಾದ ಇಬ್ಬರನ್ನು ನೌಕಾಪಡೆ ಹಡಗಿನಲ್ಲಿ ರಕ್ಷಿಸಿ ಕರೆತರಲಾಗಿದೆ. ಹಡಗಿನಲ್ಲಿದ್ದ 18 ಜನರ ಆರು ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular