HomeLatest NewsBREAKING: ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್!

BREAKING: ಶಿರಾಡಿಘಾಟ್ ನಲ್ಲಿ ಭೂಕುಸಿತ: ವಾಹನ ಸಂಚಾರ ಬಂದ್!

ಹಾಸನ: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದೆ. ಶಿರಾಡಿಘಾಟ್ ಮಾರ್ಗದಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗ ಅನುಸರಿಸಲು ಸೂಚಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular