HomeLatest NewsBREAKING: ಶಿರಾಡಿಘಾಟ್ ನಲ್ಲಿ ಸರ್ಕಾರಿ ಬಸ್-ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿ

BREAKING: ಶಿರಾಡಿಘಾಟ್ ನಲ್ಲಿ ಸರ್ಕಾರಿ ಬಸ್-ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿ

ಹಾಸನ: ಸರ್ಕಾರಿ ಬಸ್ ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನ ಹೆಗ್ಗದ್ದೆ ಗ್ರಾಮದಲ್ಲಿ ನಡೆದಿದೆ.

ರಸ್ತೆ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್ ಮೂಲಕವಾಗಿ ತೆರಳು ಪೊಲೀಸರು ವ್ಯವಸ್ಥೆ ಮಾಡಿದರು. ಎರಡೂ ವಾಹನಗಳನ್ನು ತೆರವುಗೊಳಿಸಿದ ಬಳಿಕ ಸಂಚಾರ ಆರಂಭವಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular