HomeKarnatakaBREAKING NEWS: ಶಿರಾಡಿಘಾಟ್ ನಲ್ಲಿ ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ...

BREAKING NEWS: ಶಿರಾಡಿಘಾಟ್ ನಲ್ಲಿ ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಟೆಂಪೊ

ಮಂಗಳೂರು: ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿರಾಡಿಘಾಟ್ ನಲ್ಲಿ ಅಪಘಾತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅಪಘಾತಕ್ಕೀಡಾದ ಬಸ್ ಹಾಗೂ ಟೆಂಪೊಗಳನ್ನು ತೆರವುಗೊಳಿಸುವ ಕಾರ್ಯಾಚಾರಣೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular