HomeKarnatakaBIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕಾರಣ ಪತ್ತೆ ಮಾಡಿದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ

BIG NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕಾರಣ ಪತ್ತೆ ಮಾಡಿದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಹಲವರು ಸಾವನ್ನಪ್ಪಿದ್ದರು. ಗುಡ್ಡ ಕುಸಿತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣ ಎಂದು ಅಧ್ಯಯನ ವರದಿಯೊಂದು ತಿಳಿಸಿತ್ತು. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೊಂದು ತಡೆಯಲಾಗದ ನೈಸರ್ಗಿಕ ವಿಕೋಪ ಎಂದು ಹೇಳಿತ್ತು. ಆದರೆ ಈಗ ಭೂವೈಜ್ಞಾನಿಕ ಸಮೀಕ್ಷೆ ಸರ್ಕಾರಕ್ಕೆ ಪ್ರಾಥಮಿಕ ವರದಿಯೊಂದನ್ನು ಸಲ್ಲಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ ಐ) ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ಕಾಮಗಾರಿಗಳ ವಿಧಾನಗಳ ಬಗ್ಗೆ ಹಲವು ಪ್ರಶ್ನೆ ಹುಟ್ಟುಹಾಕಿದೆ ಎಂದಿದೆ. ಅಲ್ಲದೇ ಹೆಚ್ಚಿನ ಹಾನಿ ತಡೆಗಟ್ಟಲು ತಕ್ಷಣದ ಹಾಗೂ ದೀರ್ಘಕಾಲೀನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಕಾಮಗಾರಿಯಿಂದಾಗಿ ನೈಸರ್ಗಿಕ ಒಳಚರಂಡಿ ಹರಿವಿಗೆ ತೊಂದರೆಯಾಗಿದೆ ಇಳಿಜಾರು ಪ್ರದೇಶ, ಎಡ ಪಾರ್ಶ್ವ ರಚನಾತ್ಮಕವಾಗಿ ವಿರೂಪಗೊಂಡಿದೆ. ಇಳಿಜಾರಿನಲ್ಲಿ ಮಾನವ ಹಸ್ತಕ್ಷೇಪ ಕಂಡುಬರುತ್ತಿದೆ. ಕಡಿಮೆ ಅವಧಿಯಲ್ಲಿ 503 ಮೀ.ಮಿ ಮಳೆಯಾಗಿರುವುದು ಕೂಡ ಘಟನೆಗೆ ಕಾರಣ ಎನ್ನಬಹುದು ಎಂದು ಸಮೀಕ್ಷೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆ ನೀರಿನ ನೈಸರ್ಗಿಕ ತಡೆಗಳು ಮಾಯವಾಗಿರುವುದು ಹಾಗೂ ಕಡಿದಾದ ಇಳಿಜಾರಿನ ಪ್ರದೇಶ ಸೃಷ್ಟಿಯಾಗಿರುವುದು ಭೂಕುಸಿತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular