HomeKarnatakaBREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

BREAKING NEWS: ಶಿರೂರು ಗುಡ್ಡ ಕುಸಿತ ಪ್ರಕರಣ: ಕೇರಳ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ಘಟನೆಯಲ್ಲಿ 11 ಜನರು ನಾಪತ್ತೆಯಾಗಿದ್ದರು. ಅವರಲ್ಲಿ 8 ಜನರ ಮೃತದೇಹ ಪತ್ತೆಯಾಗಿತ್ತು. ಅತಿಯಾದ ಮಳೆ ಹಾಗೂ ಗಂಗಾವಳಿ ನದಿಯಲ್ಲಿ ನೀರಿನ ಅಬ್ಬರದಿಂದಾಗಿ ಮೃತದೇಹಗಳ ಶೋಧಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಜಿಲ್ಲಾಡಳಿತದಿಂದ ಶುಕ್ರವಾರದಿಂದ ಮತ್ತೆ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಕೇರಳ ಮೂಲದ ಅರ್ಜುನ್ ಅವರ ಲಾರಿ ಇದೀಗ ನದಿಯಲ್ಲಿ ಪತ್ತೆಯಾಗಿದೆ. ಗಂಗಾವಳಿ ನದಿಯಲ್ಲಿ ಲಾರಿ ಪತ್ತೆಯಾಗಿದ್ದು, ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡದಿಂದ ಲಾರಿಯನ್ನು ನದಿಯಿಂದ ಮೇಲಕೆತ್ತುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ರಕ್ಷಣಾ ಸಿಬ್ಬಂದಿಗಳು ಸಾಥ್ ನೀಡಿದ್ದು ಲಾರಿ ಮೇಲಕೆತ್ತಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular