HomeKarnatakaಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ: ರಾಜ್ಯದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷ: ರಾಜ್ಯದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಯೊಂದಿಇಗೆ​​ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರವು ನೀಡುತ್ತಿರುವ ಪ್ರೀತಿಯ ಆಸರೆಯಾಗಿದೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

​ಇದೇ ವೇಳೆ ಫಲಾನುಭವಿಗಳಲ್ಲಿ ಒಂದು ಸಣ್ಣ ಮನವಿ. ಸರ್ಕಾರದ ‘ಗ್ಯಾರಂಟಿ ಸಮಿತಿ’ಯವರು ನಿಮ್ಮ ಮನೆ ಬಾಗಿಲಿಗೆ ಬಂದಾಗ, ದಯವಿಟ್ಟು ಅವರಿಗೆ ಬೇಕಾದ ದಾಖಲೆಗಳನ್ನು ನೀಡಿ ಎಂದಿನಂತೆ ಪ್ರೀತಿಯಿಂದ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular