HomeKarnatakaರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಿಎಂ ಡಿ.ಕೆ.ಶಿವಕುಮಾರ್: ಎಲ್ಲಾ ವರ್ಗದವರನ್ನು ಒಟ್ಟಿಗೆ ತೆಗೆದುಕೊಂಡು...

ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಿಎಂ ಡಿ.ಕೆ.ಶಿವಕುಮಾರ್: ಎಲ್ಲಾ ವರ್ಗದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಭರವಸೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ ಶುಭಾಶಯಗಳು. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ತ್ಯಾಗ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ, ಸ್ವಾತಂತ್ರ್ಯದಿಂದ ನಾವು ಬದುಕುತ್ತಿದ್ದೇವೆ. ರಾಜ್ಯದ ಜನರ ಪರವಾಗಿ ಧ್ವಜಾರೋಹಣ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಎಲ್ಲಾ ವರ್ಗದ ಜನ ಈ ಸಂಭ್ರಮಾಚರಣೆ ಮಾಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular