ಬೆಂಗಳೂರು: ಬರದ ಸಂಕಷ್ಟದಿಂದ ಅನ್ನದಾತರು ಆರ್ಥಿಕವಾಗಿ ತೊಂದರೆಗೊಳಗಾಗದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಬರಪೀಡಿತ ತಾಲೂಕುಗಳ ರೈತರಿಗೆ ಕೃಷಿ ಸಾಲಗಳ ಮರುಪಾವತಿಗೆ 12 ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಸಾಧಾರಣ ಬರ ಪರಿಸ್ಥಿತಿಯಲ್ಲಿ 3 ವರ್ಷ, ತೀವ್ರ ಬರ ಪರಿಸ್ಥಿತಿಯಲ್ಲಿ 5 ವರ್ಷಗಳವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ಅನ್ನದಾತರನ್ನು ಬರದ ಸಂಕಷ್ಟದಿಂದ ತಪ್ಪಿಸಲು ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಬರಪೀಡಿತ ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಕೃಷಿ ಸಾಲಗಳ ಮರುಪಾವತಿ ಅವಧಿಯನ್ನು ವಿಸ್ತರಿಸುವ ಜೊತೆಗೆ, ಸಾಧಾರಣ ಬರವಿದ್ದಲ್ಲಿ 3 ವರ್ಷ ಹಾಗೂ ತೀವ್ರ ಬರವಿದ್ದಲ್ಲಿ 5 ವರ್ಷಗಳವರೆಗೆ ಮರುಪಾವತಿ ಅವಧಿ ವಿಸ್ತರಣೆ ಮತ್ತು ಅಗತ್ಯವಿರುವ ರೈತರಿಗೆ ಹೊಸ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ರೈತರ ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ಘೋಷಣೆ
ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ಘೋಷಿಸಿದ್ದು, ಬಲವಂತದ ಸಾಲ ವಸೂಲಿ ನಿಷೇಧಿಸಲಾಗಿದೆ.
ರಾಜ್ಯದ ಬರ ಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್ ಗಳ ರಾಜ್ಯಮಟ್ಟದ ಸಮಿತಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆ ಪ್ರಕಟಿಸಿದೆ.
ಸಾಲ ಮರುಪಾವತಿಗೆ 12 ತಿಂಗಳ ಕಾಲಾವಕಾಶ ನೀಡುವುದರ ಜೊತೆಗೆ ಒಟ್ಟು ಸಾಲ ಮರುಪಾವತಿ ಅವಧಿ ವಿಸ್ತರಿಸಿ ರೈತರಿಗೆ ನೆರವಾಗಲು ನಿರ್ಧರಿಸಿದೆ. ರಾಜ್ಯದ ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ ಸಾಲಗಳು, ಹೈನುಗಾರಿಕೆ, ರೇಷ್ಮೆ, ಮೀನುಗಾರಿಕೆ ಸೇರಿದಂತೆ ಇತರೆ ಕೃಷಿ ಸಂಬಂಧಿತ ಸಾಲಗಳಿಗೆ 12 ತಿಂಗಳ ಮೊರಟೋರಿಯಂ ನೀಡಲು ನಿರ್ಧರಿಸಲಾಗಿದೆ.
ಸಾಧಾರಣ ಬರ ಪೀಡಿತ ತಾಲ್ಲೂಕುಗಳಲ್ಲಿ ಸಾಲ ಮರುಪಾವತಿ ಅವಧಿಯನ್ನು 36 ತಿಂಗಳಿಗೆ ಮತ್ತು ತೀವ್ರ ಬರ ಪೀಡಿತ ತಾಲೂಕುಗಳಲ್ಲಿ 60 ತಿಂಗಳಿಗೆ ವಿಸ್ತರಿಸಲಾಗಿದೆ. ಈ ವರ್ಷ ರೈತರಿಂದ ಯಾವುದೇ ರೀತಿಯ ಬಲವಂತದ ಸಾಲ ವಸೂಲಾತಿ ಮಾಡದಂತೆ ಕಟ್ಟುನಿಟ್ಟಿನ ಜೀರೋ ಟಾಲರೆನ್ಸ್ ನೀತಿಯನ್ನು ಜಾರಿಗೆ ತರಲಾಗಿದೆ.
ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ‘ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್’ ಇವುಗಳ ಜಂಟಿ ಆಶ್ರಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ:
ಆದಿತ್ಯ ಬಿರ್ಲಾ ಸನ್ ಲೈಫ್ ಇನ್ಶೂರೆನ್ಸ್, 2ನೇ ಮಹಡಿ, ಅಯ್ಯಪ್ಪ-ಡಿ ಯು ಟವರ್, ಎಂಐಜಿ-3, ಕೆಹೆಚ್‌ಬಿ ಕಾಲೋನಿ, ಪಾರ್ವತಿ ನಗರ, ಕೆಎಫ್‌ಸಿ ಎದುರು, ಬಳ್ಳಾರಿ – 583103.
ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ನೋಂದಣಿ ಶುಲ್ಕ ಇರುವುದಿಲ್ಲ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಬ್ಬರೂ ಈ ಅವಕಾಶವನ್ನು ಪಡೆದುಕೊಳ್ಳಬಹುದು.
ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದವರು ಅರ್ಹರು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ/ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಗಮಿಸತಕ್ಕದ್ದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮೊಬೈಲ್ ಸಂಖ್ಯೆಗಳಾದ 7619207762, 9663263086, 7676774293 ಅಥವಾ 6360408094 ಅನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

