HomeKarnatakaತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು. ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೊಟ್, ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular