HomeKarnatakaಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ

ಮಂತ್ರಿ ಮಾಡ್ತೀವಿ, ನಿಗಮ ಮಂಡಳಿನೂ ಕೊಡ್ತೀವಿ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ: ಶಾಸಕ ಶಿವಲಿಂಗೇಗೌಡ

ಹಾಸನ: ಸಚಿವ ಸ್ಥಾನ, ನಿಗಮ -ಮಂಡಳಿಯ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೇನೆ ಎಂದು ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ಈ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ಆಗಬಹುದು ನೋಡೋಣ. ಮಾತುಕೊಟ್ಟು ನನ್ನನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅಣತಿಯಂತೆ ನಡೆಯುತ್ತೇನೆ. ಮಂತ್ರಿ ಮಾಡ್ತೀನಿ, ನಿಗಮ -ಮಂಡಳಿನೂ ಕೊಡ್ತೀವಿ ಎಂದು ಹೇಳಿದ್ದಾರೆ ಎಂದರು.

ಎರಡೂವರೆ ವರ್ಷಕ್ಕೆ ನಿನ್ನನ್ನು ಮಂತ್ರಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಅದಕ್ಕೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಪತನ ಎಂಬ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಪತನ ಎಂಬುದು ಬಿಜೆಪಿಯವರ ಭ್ರಮೆ. ಎಲ್ಲೋ ಹಗಲುಗನಸು ಬಿದ್ದಿರಬೇಕು. ಸರ್ಕಾರ ಬೀಳುತ್ತೆ ಎಂಬುದು ಬಿಜೆಪಿಯವರ ಕನಸು ಅಷ್ಟೇ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular