ಮತದಾರರಿಗೆ ಹಣ ಹಂಚಿಕೆ ಕುರಿತ ಆಡಿಯೋ ವೈರಲ್: ಶಾಸಕ ಶಿವಲಿಂಗೇಗೌಡ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ಧ್ವನಿಯನ್ನು ನಕಲಿ ಮಾಡಿ ಆಡಿಯೋ ವೈರಲ್ ಮಾಡುವ ಮೂಲಕ ಗೌರವಕ್ಕೆ ಧಕ್ಕೆ ತಂದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅರಸಿಕೆರೆ ಕಾಂಗ್ರೆಸ್ ಶಾಸಕ, ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

2024ರ ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಿಗೆ ಹಣ ಹಂಚುವಂತೆ ನಾನು ಹೇಳಿರುವುದಾಗಿ ಸುಳ್ಳು ಹೇಳಿಕೆಗಳನ್ನು ಹಾಗೂ ನನ್ನ ಧ್ವನಿಯ ಮೂಲಕ ನಕಲಿ ಆಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಇದರಿಂದ ನನ್ನ ಘನತೆಗೆ ಧಕ್ಕೆ ಉಂಟಾಗಿದ್ದು, ಆಡಿಯೋ ಹರಿಬಿಟ್ಟಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read