HomeKarnatakaಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ದಳಪತಿಗಳ ಬಿಗ್ ಶಾಕ್: ಬೃಹತ್ ಶಕ್ತಿ ಪ್ರದರ್ಶನ,...

ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೆ ದಳಪತಿಗಳ ಬಿಗ್ ಶಾಕ್: ಬೃಹತ್ ಶಕ್ತಿ ಪ್ರದರ್ಶನ, ನಾಳೆಯೇ ಅಭ್ಯರ್ಥಿ ಘೋಷಣೆ

ಹಾಸನ: ಕಾಂಗ್ರೆಸ್ ಸೇರಲು ಸಜ್ಜಾಗಿರುವ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರಿಗೆ ಸೆಡ್ಡು ಹೊಡೆಯಲು ಜೆಡಿಎಸ್ ನಾಯಕರು ಸಜ್ಜಾಗಿದ್ದಾರೆ.

ನಾಳೆ ಅರಸೀಕೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಜೆಡಿಎಸ್ ಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಶಾಸಕ ಶಿವಲಿಂಗೇಗೌಡರ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ದಳಪತಿಗಳು ಸಿದ್ಧತೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಅರಸೀಕೆರೆ ಜೆಡಿಎಸ್ ಅಭ್ಯರ್ಥಿಯನ್ನು ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಲಿದ್ದಾರೆ/ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ.

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಣಾವರ ಅಶೋಕ್ ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಕುಮಾರಸ್ವಾಮಿ ನಾಳೆ ಹೊಸ ಅಭ್ಯರ್ಥಿ ಹೆಸರು ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಅಭ್ಯರ್ಥಿ ಘೋಷಣೆ ಬಳಿಕ ಮುಂದಿನ ನಿರ್ಧಾರವೆಂದು ಶಿವಲಿಂಗೇಗೌಡರು ಹೇಳಿದ್ದಾರೆ. 25000 ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ಜೆಡಿಎಸ್ ನಿಂದ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳಿನ ಸಮಾವೇಶ ಭಾರಿ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular