HomeLatest NewsBREAKING: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

BREAKING: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ಕಾಗೆಹಳ್ಳದಲ್ಲಿ ಈ ಅವಘಡ ಸಂಭವಿಸಿದೆ. ಸೇತುವೆಯ ತಡೆಗೋಡೆಗೆ ನುಗ್ಗಿ ಬಸ್ ಕೆಳಗೆ ಬಿದ್ದಿದೆ. ಘಟನೆಯಲ್ಲಿ 20 ಪೊರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭದ್ರಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಿಂದ ಭದ್ರಾವತಿಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ 40 ಪ್ರಯಣಿಕರಿದ್ದರು. ಭದ್ರಾವತಿಗೆ ತಲುಪಲು ಇನ್ನೇನು ಕೆಲ ದೂರವಿದೆ ಎನ್ನುವಾಗ ಕಾಗೆಹಳ್ಳದ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular