ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಗೆ ವರದಿ ನೀಡಲು ಸೂಚಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರದಲ್ಲಿ 8 ವರ್ಷದ ಬಾಲಕ ರಚತ್ ಮಂಗನ ಕಾಯಿಲೆಗೆ ಬಲಿಯಾಗಿದ್ದಾನೆ. ಈ ಮೂಲಕ ಈ ವರ್ಷ ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಬಾಲಕನ ಸಾವಿನ ಬಗ್ಗೆ ಒಂದು ವಾರದೊಳಗೆ ವರದಿ ನೀಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಉಲ್ಭಣಗೊಳ್ಳುತ್ತಿದ್ದು, ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹರಸಾಹಸಪಡುತ್ತಿದೆ.