HomeLatest Newsಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಗಂಭೀರ ಆರೋಪ

ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಗಂಭೀರ ಆರೋಪ

ಶಿವಮೊಗ್ಗ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ನೀರಾನೆ ದಾಳಿಗೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹುಲಿಧಾಮದಲ್ಲಿ ನಡೆದಿದ್ದು, ವೈದ್ಯೆ ಸಾವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನೀರಾನೆ ದಾಳಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಹಾಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೃತ ಸಮೀಕ್ಷಾ ರೆಡ್ಡಿ ಮಾವ ನವೀನ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ನಲ್ಲಿ ಮಾತನಾಡಿದ ನವೀನ್ , ಚಿಕ್ಕಂದಿನಿಂದಲೂ ಕಾಡು ಪ್ರಾಣಿಗಳೆಂದರೆ ಸಮೀಕ್ಷಾಗೆ ಹೆಚ್ಚು ಪ್ರೀತಿ. ನೂರಾರು ಕೋಟಿ ರೂ ಆಸ್ತಿ ಇದ್ದರೂ ಸೇವೆ ಮಾಡಬೇಕೆಂಬ ಹಂಬಲ ಇತ್ತು. ಮದುವೆ ಮಾಡಿಕೊಳ್ಳುವ ಯೋಚನೆ ಕೂಡ ಸಮೀಕ್ಷಾಗೆ ಇರಲಿಲ್ಲ. ಅಧಿಕಾರಿಗಳೇ ಹಾಸ್ಟೆಲ್ ಬಳಿ ಜೀಪ್ ಕಳುಹಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಇಬ್ಬರು ಯುವತಿಯರನ್ನ ಜೊತೆಗೆ ಕಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬ ಹುಡುಗಿಯನ್ನು ನೀರಾನೆ ಬಳಿ ಕಳಿಸಲು ಕಾಮನ್​ಸೆನ್ಸ್ ಬೇಕು. 20 ಸಿಂಹಗಳು ಸಹ ಒಂದು ನೀರಾನೆ ಸಮೀಪ ಹೋಗಲ್ಲ, ಅದರಲ್ಲೂ ನೀರಾನೆ ಗರ್ಭಿಣಿ ಇದ್ದು ಭಯ ಇರುತ್ತೆ. ವೈಲ್ಡ್‌ಲೈಫ್ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು. ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅಧಿಕಾರಿಗಳ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದ್ದಾರೆ.

ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಮತ್ತು ಸಫಾರಿಯಲ್ಲಿ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶು ವೈದ್ಯಾಧಿಕಾರಿ ಡಾ. ಸಮೀಕ್ಷಾ ರೆಡ್ಡಿ (27) ಅವರು ಮೃತಪಟ್ಟಿದ್ದರು.

ಬೆಂಗಳೂರಿನ ಬನ್ನೇರುಘಟ್ಟ ಮೂಲದ ಡಾ. ಸಮೀಕ್ಷಾ ಅವರು ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದು ಮಂಗಳೂರಿನಲ್ಲಿ ವನ್ಯಜೀವಿಗಳ ಸಂರಕ್ಷಣಾ ತಂಡದೊಂದಿಗೆ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದರು. ಶಿವಮೊಗ್ಗ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಪಶುವೈದ್ಯಾಧಿಕಾರಿಯಾಗಿ ಫೆಬ್ರವರಿ ಮೊದಲನೇ ವಾರದಲ್ಲಿ ಕರ್ತವ್ಯಕ್ಕೆ ಸೇರಿಕೊಂಡಿದ್ದರು.

ಗುರುವಾರ ರಾತ್ರಿ 10.30ರ ಸುಮಾರಿಗೆ ಅವರು ಸನ್‌ ಕಾನ್ಯೂರ್‌ ಪಕ್ಷಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11.45ರ ಸುಮಾರಿಗೆ ಗರ್ಭಿಣಿ ನೀರಾನೆಯಾದ ಹಂಸಿನಿ ದೇಹದ ಉಷ್ಣತೆಯನ್ನು ಥರ್ಮಲ್‌ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular