ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕು ಹಾಗೂ ಶಿಕಾರಿಪುರದಲ್ಲಿ ವಾರದ ಹಿಂದೆ ಹೋರಿ ಬೆದರಿಸುವ ಸ್ಪರ್ಧೆ ನಡೆದಿತ್ತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ರಾಮನಕೊಪ್ಪ ಹಾಗೂ ದೊಡ್ಡಕೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಈ ಘಟನೆ ನಡೆದಿದೆ.
