HomeLatest NewsBREAKING: ರಸ್ತೆಗುಂಡಿ ತಪ್ಪಿಸಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಭೀಕರ ಅಪಘಾತದಲ್ಲಿ ಯುವಕ...

BREAKING: ರಸ್ತೆಗುಂಡಿ ತಪ್ಪಿಸಲು ಹೋಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಭೀಕರ ಅಪಘಾತದಲ್ಲಿ ಯುವಕ ಸಾವು

ಶಿವಮೊಗ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮಲಗೊಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ಯುವಕ ಮೆಡಿಕಲ್ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular