HomeKarnatakaBREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ

BREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್.ಪಿ. ಮಿಥುನ್ ಕುಮಾರ್ ಹೇಳಿದ್ದಾರೆ.

ಇದುವರೆಗೆ 60 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಕೆಲವು ಆರೋಪಿಗಳನ್ನು ಚಿತ್ರದುರ್ಗ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದೇವೆ. ಬಂಧಿತರಿಂದ ಒಂದು ಕಾರ್, ಒಂದು ತ್ರಿಚಕ್ರ ವಾಹನ, ಎರಡು ಬೈಕ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಲಾಟೆ ವೇಳೆ ಕಲ್ಲೆಸೆತದಿಂದಾಗಿ 7 ಮನೆಗಳ ಗಾಜು ಪುಡಿಪುಡಿಯಾಗಿದೆ. ಬೆಳಿಗ್ಗೆಯಿಂದ ಇದುವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. 144 ಸೆಕ್ಷನ್ ಜಾರಿ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯುತ್ತಿಲ್ಲ. ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತವಾಗಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular