BIG NEWS: ಶಿವಮೊಗ್ಗ- ಭದ್ರಾವತಿಗೆ ಮೆಟ್ರೋ ರೈಲು ತರಲು ಪ್ರಯತ್ನ: ಸಂಸದ ರಾಘವೇಂದ್ರ

ಶಿವಮೊಗ್ಗ: ಕ್ಷೇತ್ರದ ಜನ ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಮಾಡಿdಲ್ಲಿ ಶಿವಮೊಗ್ಗ -ಭದ್ರಾವತಿ ಅವಳಿ ನಗರ ಮತ್ತಷ್ಟು ಅಭಿವೃದ್ಧಿಪಡಿಸುವ ಜೊತೆಗೆ ಮೆಟ್ರೋ ರೈಲು ಮಂಜೂರು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಭದ್ರಾವತಿ ನಗರಸಭೆ ಕಚೇರಿ ಮುಂಭಾಗ ಶನಿವಾರ ನಾಡಹಬ್ಬ ದಸರಾ ಉತ್ಸವ ಅಂಗವಾಗಿ ಆಯೋಜಿಸಿದ್ದ ಮನರಂಜನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಸದಸ್ಯನಾಗಿ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಮತ್ತಷ್ಟು ಕಾರ್ಯಗಳು ಬಾಕಿ ಉಳಿದಿವೆ, ಜನ ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಮಾಡಿ ಕಳಿಸಿದರೆ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುತ್ತೇನೆ ಎಂದು ಹೇಳಿದ್ದಾರೆ.

ಶಿವಮೊಗ್ಗ -ಭದ್ರಾವತಿಗೆ ಮೆಟ್ರೋ ರೈಲು ತರಲು ಪ್ರಯತ್ನ ಮಾಡುತ್ತೇನೆ. ನವೆಂಬರ್ 27ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ತಿರುಪತಿ, ಗೋವಾ, ಹೈದರಾಬಾದ್ ನಗರಗಳಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read