BIG NEWS: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತ; ಶರವೇಗದಲ್ಲಿ ಬಂದು ಯುವಕನ ಹೊಟ್ಟೆಗೆ ತಿವಿದ ಹೋರಿ; ಚಿಕಿತ್ಸೆ ಫಲಿಸದೇ ಯುವಕ ಸಾವು

ಶಿವಮೊಗ್ಗ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ದುರಂತವೊಂದು ಸಂಭವಿಸಿದೆ. ಸ್ಪರ್ಧೆ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲುಕಿನಲ್ಲಿ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಮಲೆನಾಡಿನಲ್ಲಿಯೂ ಹೋರಿ ಬೆದರಿಸುವ ಸ್ಪರ್ಧೆ ಜೋರಾಗಿದ್ದು, ಶಿಕಾರಿಪುರದ ತರಲಘಟ್ಟ ಗ್ರಾಮದಲ್ಲಿ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಲಾಗಿತ್ತು. ರೋಮಾಂಚನಕಾರಿಯಾದ ಸ್ಪರ್ಧೆ ವೀಕ್ಷಿಸಲು ಸಾವಿರಾರು ಜನರು ಆಗಮಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಯೊದು ಶರವೇಗದಲ್ಲಿ ನುಗ್ಗಿ ಯುವಕನಿಗೆ ಕೊಂಬಿನಿಂದ ತಿವಿದಿದೆ.

27 ವರ್ಷದ ಯುವಕ ಪರಶುರಾಮ್ ತೀವ್ರವಾಗಿ ಗಾಯಗೊಂಡಿದ್ದ. ಹೋರಿ ಯುವಕನ ಹೊಟ್ಟೆಗೆ ಕೊಂಬಿನಿಂದ ತಿವಿದಿದೆ. ಗಾಯಾಳು ಯುವಕನನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ.

ಕೂಲಿ ಹಾಗೂ ಪೇಂಟಿಂಗ್ ಮಾಡಿ ಕುಟುಂಬವನ್ನು ನೋಡಿಕೊಳ್ಳುತ್ತಿದ್ದ ಯುವಕ ಈಗ ಹೋರಿ ತಿವಿತದಿಂದ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read