HomeKarnatakaBIG NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: 15 ಕ್ಕೂ ಹೆಚ್ಚು ಜನರಿಗೆ ಗಂಭೀರ...

BIG NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಬಳಿ ನಡೆದಿದೆ.

ಸಾಗರ ಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಬಸ್ ಆನಂದಪುರ ಬಳಿ ಕೆರೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘತದಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಬಸ್ ನಲ್ಲಿ ಒಟ್ಟು 28 ಜನರು ಪ್ರಯಾಣಿಸುತ್ತಿದ್ದರು. 9 ಗಾಯಾಳುಗಳನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರನ್ನು ಸಾಗರ ಹಾಗೂ ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular